ಪದವಿ ಕೋರ್ಸ್ ತರಗತಿ ಹಾಗೂ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ : ಡಿಸಿಎಂ ಡಾ.ಅಶ್ವಥ್ ನಾರಾಯಣ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿದೆ, ನಿಜ ಆದರೆ ಕೋವಿಡ್ ಕಾರಣದಿಂದ ಪದವಿ ತರಗತಿಗಳು ಹಾಗೂ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಸರ್ಕಾರ ನಿಗದಿಪಡಿಸಿದ ವೇಳಾಪಟ್ಟಿಯಂತೆ ಪದವಿ ಪರೀಕ್ಷೆಗಳು ನಡೆಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಾ.ಸಿ ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ವಿಭಾಗದ ಪರಿಸ್ಥಿತಿ ಅವಲೋಕನ ನಡೆಸಿದ ಸಚಿವರು, ಆಫ್ ಲೈನ್ ತರಗತಿ ಎಂದಿನಂತೆ ಮುಂದುವರೆಯುತ್ತವೆ. ಹಾಗೂ ಸರ್ಕಾರ ಹೊರಡಿಸಿದ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯುತ್ತವೆ. ವಿಶ್ವವಿದ್ಯಾಲಯ, ಮಹಾವಿದ್ಯಾಲಯ, ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್ ಗಳು ಸೇರಿದಂತೆ ಇನ್ನಿತರ ಶಿಕ್ಷಣ ಸಂಸ್ಥೆಗಳ ಪದವಿ ಪರೀಕ್ಷೆಗಳ ವೇಳಾಪಟ್ಟಿ ಬದಲಾವಣೆ ಇಲ್ಲ. ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ವಿಶ್ವವಿದ್ಯಾಲಯ ಹಾಗೂ ಮಹಾವಿದ್ಯಾಲಯಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ, ಕೋವಿಡ್ ಮಾರ್ಗಸೂಚಿ ಪಾಲಿಸಲು ತಿಳಿಸಿದ್ದೇನೆ. ಹಾಗೇ ಸಮಾಜ ಕಲ್ಯಾಣ ಇಲಾಖೆ , ಬಿಸಿಎಂ ಹಾಸ್ಟೆಲ್ ಸೇರಿದಂತೆ ಎಲ್ಲಾ ಪದವಿ ಹಾಸ್ಟೆಲ್ ಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಪದವಿ ತರಗತಿ ಹಾಗೂ ಪರೀಕ್ಷೆಗಳ ಬಗ್ಗೆ ಯಾವುದೇ ರೀತಿಯ ಗೊಂದಲ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು