ಪೈಸೆ ಲೆಕ್ಕದಲ್ಲಿ ತೈಲ ದರ ಇಳಿಸಿದ ಇಷ್ಟೊಂದು ಹಣ ಉಳಿಸಿ ಏನೇನು ಮಾಡುತ್ತೀರಿ? : ರಾಹುಲ್ ಗಾಂಧಿ ವ್ಯಂಗ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ನೂರರ ಗಡಿ ದಾಟಿದ ಪೆಟ್ರೋಲ್ ಡಿಸೇಲ್ ಬೆಲೆ ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಬೆಲೆಯನ್ನು 17/18 ಪೈಸೆ ಇಳಿಸಿದೆ. ಇದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಒಂದು ವರ್ಷದ ನಂತರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ತೈಲ ಬೆಲೆ 17/ 18 ಪೈಸೆ ಇಳಿಸಿದ ಕೇಂದ್ರ ಸರ್ಕಾರ – ಇಷ್ಟು ಮೊತ್ತದ ಹಣವನ್ನು ಏನು ಮಾಡುತ್ತೀರಿ? ಎಂದು ರಾಹುಲ್
ಮುಖಂಡ ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಪುಟದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ತೈಲ ಬೆಲೆ ಒಂದೇ ಸಮನೇ ಏರುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಈಗ ಕಟುವಾಗಿ ಟೀಕಿಸಿದ್ದಾರೆ.

ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿದಂತೆ 5 ರಾಜ್ಯಗಳಲ್ಲಿ ಒಟ್ಟು 824 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿವೆ.

ಐದು ರಾಜ್ಯಗಳಲ್ಲಿ ಮತದಾನವು ಮಾರ್ಚ್ 27 ರಂದು ಪ್ರಾರಂಭವಾಗಿದೆ. ಬರುವ ಏಪ್ರಿಲ್ 29 ಕ್ಕೆ ಕೊನೆಗೊಳ್ಳುತ್ತದೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆಯ ಮತ ಎಣಿಕೆ ಮೇ 2 ರಂದು ನಡೆಯಲಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು