ಪಾಕಿಸ್ತಾನ ಪ್ರಧಾನಿಗೆ ಶುಭ ಹಾರೈಸಿದ ನರೇಂದ್ರ ಮೋದಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೊಸದಿಲ್ಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಕೆಲ ದಿನಗಳ ಹಿಂದೆ ಕೋವಿಡ್‌ ಪರೀಕ್ಷೆ ವರದಿಯಲ್ಲಿ ಪಾಸಿಟಿವ್‌ ಆಗಿತ್ತು. ಈ ಬಗ್ಗೆ ಪಾಕಿಸ್ತಾನದ ಆರೋಗ್ಯ ಸಚಿವರು ಟ್ವೀಟ್‌ ಮೂಲಕ ಅಧಿಕೃತ ಹೇಳಿಕೆ ನೀಡಿದ್ದರು. ನಿನ್ನೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಚೇತರಿಕೆಗೆ ಭಾರತದ ಪ್ರಧಾನಿ ಮೋದಿ ಟ್ವೀಟರ್ ಮೂಲಕ ಹಾರೈಕೆ ವ್ಯಕ್ತಪಡಿಸಿದ್ದಾರೆ.

‘ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್ ಕೋವಿಡ್ -19 ಸೋಂಕಿನಿಂದ‌ ಬೇಗ ಗುಣಮುಖರಾಗಿ ಎಂದು ಶುಭ ಹಾರೈಸುತ್ತೇನೆ’ ಎಂದು ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ. ಮೋದಿಯವರ ಟ್ವೀಟ್ ಗೆ ಸಾವಿರಾರು ಜನರು ಪ್ರತಿಕ್ರಿಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು