ಪಾಕಿಸ್ತಾನ ವಿರುದ್ಧ ಭಾರತ ತಂಡಕ್ಕೆ ಸೋಲು: ಹೃದಯಾಘಾತದಿಂದ ಕ್ರಿಕೆಟ್ ಅಭಿಮಾನಿ ಸಾವು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಡಗು: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಸೋಲು ಆದ ಹಿನ್ನಲೆಯಲ್ಲಿ ಮನನೊಂದ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ (55) ಎನ್ನುವರು ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.

ಭಾನುವಾರ ರಾತ್ರಿ ಇಂಡಿಯಾ ಪಾಕಿಸ್ತಾನ ಟಿ-20 ಕ್ರಿಕೆಟ್ ಪಂದ್ಯವನ್ನು ಟಿ.ವಿಯಲ್ಲಿ ವೀಕ್ಷಿಸುತ್ತಿದಾಗ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಸೋಲು ಆಗಿರುವ ಹತ್ತು ನಿಮಿಷದಲ್ಲೇ ಉದಯ ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಷ್ಟೊತ್ತಿಗಾಗಲೇ ಉದಯ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದರು.

ಹಿರಿಯ ಕ್ರೀಡಾಭಿಮಾನಿ ಹಾಗೂ ಕಾಫಿ ಬೆಳೆಗಾರರಾಗಿದ್ದ ಉದಯ ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು