ಪಕ್ಷದ ಶಿಸ್ತು ಉಲ್ಲಂಘನೆ: ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖುಬಾ ಉಚ್ಚಾಟನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಬಿಜೆಪಿ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಇಂದು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೇಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ವರಿಷ್ಠರು ಮನವೊಲಿಸಲು ಪ್ರಯತ್ನಿಸಿದರೂ ಜಗ್ಗದ ಖೂಬಾ ಬಿಜೆಪಿ ಪಕ್ಷದ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ ವಿರುದ್ಧ ಸ್ಪರ್ಧೆ ಮಾಡಿ ಬಿಜೆಪಿಗೆ ಸವಾಲು ಒಡ್ಡಿದ ಖೂಬಾ ಅವರನ್ನು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರು ಕೋವಿಡ್​ಗೆ ಬಲಿಯಾದ ಹಿನ್ನೆಲೆಯಲ್ಲಿ, ಬಸವಕಲ್ಯಾಣ ಕ್ಷೇತ್ರ ತೆರವಾಗಿತ್ತು. ಇಂದು ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಜನ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಅವರನ್ನು ಕಡೆಗಣಿಸಿ, ಕೊನೆಗೆ ಶರಣು ಸಲಗರ ಅವರಿಗೆ ಟಿಕೆಟ್ ನೀಡಿದೆ.

ಈಗ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಹಾಗೂ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖುಬಾ ನಡುವೆ ಚತುಷ್ಕೋನ ಸ್ಪರ್ಧೆಯಿದ್ದು ತಮ್ಮ ಕುತೂಹಲಕಾರಿಯಾಗಿದೆ. ಬಿಜೆಪಿಯಿಂದ ಶರಣು ಸಲಗರ ಹಾಗೂ ಕಾಂಗ್ರೆಸ್​ನಿಂದ ಮಾಲಾ ಬಿ ಅವರು ಸ್ಪರ್ಧಿಸಿದ್ದಾರೆ. ಜೆಡಿಎಸ್​ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಕಣದಲ್ಲಿದ್ದರೆ, ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸೆಡ್ಡು ಹೊಡೆದಿದ್ದಾರೆ. ಜೆಡಿಎಸ್​ನ ಮುಸ್ಲಿಮ್ ಅಭ್ಯರ್ಥಿಯು ಇಲ್ಲಿ ಕಾಂಗ್ರೆಸ್​ನ ಸಾಂಪ್ರದಾಯಿಕ ಮತಬ್ಯಾಂಕ್ ಅನ್ನ ಒಡೆಯುವ ಸಾಧ್ಯತೆ ಇದೆ. ಖೂಬಾ ಅವರು ಬಿಜೆಪಿ ಅಭ್ಯರ್ಥಿಗೆ ಕಂಟಕವಾಗುವ ಸಾಧ್ಯತೆ ಇದೆ. ಹೀಗಾಗಿ, ಅಂತಿಮವಾಗಿ ಯಾರಿಗೆ ಗೆಲುವಿನ ಮಾಲೆ ಸಿಗುತ್ತದೆ ಎಂಬುದು ತುಂಬಾ ಕುತೂಹಲ ಕೆರಳಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು