ಕೊಣಾಜೆ(01-11-2020): ಕೊಣಾಜೆಯಲ್ಲಿ ನಾಪತ್ತೆಯಾಗಿದ್ದ ಹಿರಿಯ ವ್ಯಕ್ತಿಯೊಬ್ಬರ ಮೃತದೇಹ ಇರಾ ಸಮೀಪದ ಗುಡ್ಡವೊಂದರಲ್ಲಿ ಹೂತು ಹಾಕಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಲಾರ್ ಅರಸ್ತಾನದ ಪಲ್ಲಿಯಬ್ಬ(70) ಕೊಲೆಯಾದವರು. ಇವರನ್ನು ಕೊಲೆಗೈದು ಇರಾ ಸಮೀಪದ ಗುಡ್ಡವೊಂದರಲ್ಲಿ ಹೂತು ಹಾಕಲಾಗಿದೆ. ಪಲ್ಲಿಯಬ್ಬ ಗುರುವಾರ ಸಂಜೆ ಕಾಣೆಯಾಗಿದ್ದರು. ಶುಕ್ರವಾರ ಮಧ್ಯಾಹ್ನದವರೆಗೂ ಅವರ ಮೊಬೈಲ್ ರಿಂಗ್ ಆಗುತ್ತಿತ್ತು. ಬಳಿಕ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡ ಪಲ್ಲಿಯಬ್ಬ ಸಂಬಂಧಿಕರು ಇಬ್ಬರು ಶಂಕಿತರನ್ನು ವಿಚಾರಿಸಿದಾಗ ಕೊಲೆ ಬಗ್ಗೆ ಬಹಿರಂಗವಾಗಿದೆ ಎನ್ನಲಾಗಿದೆ.
ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಕೊಣಾಜೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಹಣಕಾಸಿನ ವ್ಯವಹಾರ, ಗಾಂಜಾ ತಂಡದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.