ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ: ಡಿಕೆಶಿಗೆ ಬಿಜೆಪಿ ತಿರುಗೇಟು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಉಚಿತ ಲಸಿಕೆ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿರುವ ಡಿ.ಕೆ.ಶಿವಕುಮಾರ್ ಅವರೇ, ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದಷ್ಟು ಸುಲಭವಾಗಿ ಸಹಾಯ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ ಎಂದು ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಇಂದು ಸುದ್ದಿಗೋಷ್ಠಿಯಲ್ಲಿ ಕೋವಿಡ್ ಲಸಿಕೆ ಖರೀದಿಗೆ ಕಾಂಗ್ರೆಸ್ ಶಾಸಕರ ನಿಧಿಯಿಂದ 100 ಕೋಟಿ ನೀಡುತ್ತೇವೆ ಎಂದು ಹೇಳಿದರು ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಸರಣಿ ಟ್ವೀಟ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ವಿರುದ್ಧ ವಾಗ್ದಾಳಿ ನಡೆಸಿದೆ.

ಮಾನ್ಯ ಡಿಕೆಶಿ ಅವರೇ, ಉಚಿತ ಲಸಿಕೆ‌ ನೀಡಲು ನಿಮ್ಮ‌ ಅಧಿನಾಯಕಿ ಸೋನಿಯಾ ಗಾಂಧಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕುವ ಯೋಜನೆ ರೂಪಿಸಿದ್ದೀರಾ?
ಜಗತ್ತಿನ ನಾಲ್ಕನೇ ಶ್ರೀಮಂತ ಮಹಿಳೆ ಇದುವರೆಗೆ ಕೋವಿಡ್ ಸಹಾಯ ಹಸ್ತ ಚಾಚಿಲ್ಲವೇಕೆ?
ದೆಹಲಿಯಿಂದ ಗೋವಾಕ್ಕೆ ಬಂದದ್ದಾಯಿತು, ಗೋವಾದಿಂದ ಇಟಲಿಗೋ? ಸಂಕಷ್ಟದ ಸಮಯದಲ್ಲಿಬಿಟ್ಟಿ ಸಲಹೆ ನೀಡುವುದು, ಜನರ ದಾರಿ ತಪ್ಪಿಸುವುದು. ಇದು ಭಾರತೀಯ ಕಾಂಗ್ರೆಸ್ ಪಕ್ಷ ದೇಶದ ಜನರಿಗೆ ಮಾಡುತ್ತಿರುವ ದ್ರೋಹ ಎಂದು ಬಿಜೆಪಿ ಆರೋಪಿಸಿದೆ.

ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನಿಮಗೆ ನಿಜಕ್ಕೂ ಸಹಾಯ ಮಾಡುವ ಮನಸಿದ್ದರೆ ಒಂದಿಷ್ಟು ಸುಮ್ಮನಿದ್ದು ಬಿಡಿ.
ಪೊಳ್ಳು ಆರೋಪ ಮಾಡುವುದು ಬಿಟ್ಟು ಸುಮ್ಮನಿರುವಿರಾ? ಸರ್ಕಾರಕ್ಕೆ ಸವಾಲೆಸೆಯುವ ಡಿಕೆಶಿ
ರಾಜೀವ್ ಗಾಂಧಿ ಫೌಂಡೇಶನ್ ಖಾತೆಯಲ್ಲಿ ಲಕ್ಷಾಂತರ ಕೋಟಿ ಹಣ ಕೊಳೆಯುತ್ತಿದೆ. ನಿಮ್ಮ ಆದಾಯಕ್ಕೆ ಮೀರಿದ ಆಸ್ತಿಯ ತನಿಖೆ ನಡೆಯುತ್ತಿದೆ. ಇದ್ಯಾವುದೂ ನ್ಯಾಯ ಮಾರ್ಗದ ಗಳಿಕೆಯಲ್ಲ ಎಂದು ಟೀಕಿಸಿದೆ.

ಸಹಾಯದ ಹೆಸರಿನಲ್ಲೂ ಕಪ್ಪು ಬಿಳುಪು ದಂಧೆಗೆ ಇಳಿದಿದ್ದೀರಾ? ಉಚಿತ ಲಸಿಕೆಗೆ ನಾವು ಸಹಾಯ ಮಾಡುತ್ತೇವೆ ಎಂದು ಡಿಕೆಶಿ ಹೇಳಿಕೆ ನೀಡಿದಾಗಲೇ, ಅತ್ತೆಯ ದುಡ್ಡನ್ನು ಅಳಿಯನಿಗೆ ದಾನ ಮಾಡುವ ಚಿಲ್ಲರೆ ಯೋಜನೆ ರೂಪಿಸುತ್ತಿರಬಹುದೆಂಬ ಶಂಕೆಯಿತ್ತು. ಈಗ 100 ಕೋಟಿ ನೀಡುವ ಘೋಷಣೆ ಮಾಡಿದ್ದಾರೆ. ಇದು ಜನರ ದಾರಿ ತಪ್ಪಿಸುವ ರಾಜ್ಯ ಕಾಂಗ್ರೆಸ್ ಪಕ್ಷದ ಮತ್ತೊಂದು ಯೋಜನೆ ಅಷ್ಟೇ! ಎಂದು ರಾಜ್ಯ ಬಿಜೆಪಿ ಟಾಂಗ್ ಕೊಟ್ಟಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು