ಪರದೆಯಲ್ಲಿ ಮತ್ತೆಮತ್ತೆ ಮುಖತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ, ರಾಜ್ಯಗಳ ಬೇಡಿಕೆ ಈಡೇರಿಸಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟಾಂಗ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಪ್ರಧಾನಿ‌ ನರೇಂದ್ರ ಮೋದಿಯವರೇ,
ಪರದೆಯಲ್ಲಿ ಮತ್ತೆಮತ್ತೆ ಮುಖತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೋನಾ ವೈರಸ್ ನಿಯಂತ್ರಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ನಡೆಸಿದ ಪಿಎಂ-ಸಿಎಂ ವಿಡಿಯೋ ಸಂವಾದ ಕುರಿತು ಪ್ರಶ್ನಿಸಿದ್ದಾರೆ.

ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ.
ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು
ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ?

ಬೆಂಗಳೂರಿನ ಖಾಸಗಿ/ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487. ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು ಕರ್ನಾಟಕದ ಮುಖ್ಯಮಂತ್ರಿ ನಿಮಗೇನಾದರೂ ತಿಳಿಸಿದ್ದಾರೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ,
ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ,
ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ.
ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ,
‘ಪರಿಸ್ಥಿತಿ ಕೈಮೀರಿಹೋಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ,

ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂದು ನರೇಂದ್ರ ಮೋದಿಯವರಿಗೆ ಟ್ವಿಟ್ಟರ್ ಮೂಲಕ ಕೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು