ಪತ್ರಕರ್ತ ಸಿದ್ಧೀಖ್ ಕಪ್ಪನ್ ನಿಂದ ಜಾಮೀನು ಅರ್ಜಿ ಸಲ್ಲಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಕ್ನೋ: ಉತ್ತರ ಪ್ರದೇಶದಲ್ಲಿ ಸೆರೆಯಾಗಿರುವ ಪತ್ರಕರ್ತ ಸಿದ್ಧೀಕ್ ಕಪ್ಪನ್ ಜಾಮೀನು ಅರ್ಜಿ ಸಲ್ಲಿಸಿದ್ಧಾರೆ.‍ ಜಾಮೀನಿಗಾಗಿ ಅವರು ಮಥುರಾ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ತನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆಯೆಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.  ಯಾವುದೇ ಪುರಾವೆಗಳಿಲ್ಲದೇ ತನ್ನ ಮೇಲೆ ಗಂಭೀರ ಆರೋಪ ಹೊರಿಸಿ ಜೈಲಿಗೆ ತಳ್ಳಲಾಗಿದೆಯೆಂದೂ ಹೇಳಿದ್ದಾರೆ.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದ 2020 ಅಕ್ಟೋಬರ್ ತಿಂಗಳಲ್ಲಿ ಹತ್ರಸಿನಲ್ಲಿ ನಡೆದ ದಲಿತ ಹೆಣ್ಣು ಮಗಳ ಅತ್ಯಾಚಾರ ಮತ್ತು ಕೊಲೆಯ ಬಳಿಕ, ಪತ್ರಕರ್ತ ಸಿದ್ದೀಖ್, ಸಂತ್ರಸ್ತೆಯ ಮನೆಗೆ ಭೇಟಿ ಕೊಡಲು ಹೋಗಿದ್ದರು. ವೇಳೆಯಲ್ಲಿ ಉತ್ತರ ಪ್ರದೇಶದ ಪೋಲೀಸರು ಆತನನ್ನು ಬಂಧಿಸಿದ್ದಲ್ಲದೇ ದೇಶದ್ರೋಹ, ಸಮುದಾಯಗಳೆಡೆಯಲ್ಲಿ ವೈರತ್ವ ಮೂಡಿಸಲು ಪ್ರಯತ್ನ, ಭಯೋತ್ಪಾದಕ ಚಟುವಟಿಕೆಗೆ ಹಣ ಸಂಗ್ರಹ ಮುಂತಾದ ಆರೋಪಗಳನ್ನು ಹೊರಿಸಿ, ಜೈಲಿಗೆ ತಳ್ಳಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು