ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ , ಗೃಹಿಣಿಯರಿಗೆ ಮಾಸಿಕ ಎರಡು ಸಾವಿರ ಸಹಾಯ ಧನ | ಅಸ್ಸಾಮಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಗುವಾಹಟಿ: ಅಸ್ಸಾಮ್ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ.

ಗುವಾಹಟಿಯಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ. ಅದಕ್ಕಾಗಿಯೆಂದೇ ವಿಶೇಷ ಕಾನೂನನ್ನು ಮಾಡುತ್ತೇವೆ ಮೊದಲಾದ ಅಂಶಗಳು ಪ್ರಣಾಳಿಕೆಯಲ್ಲಿ ಅಡಕವಾಗಿವೆ.

ರಾಜ್ಯದ ಪ್ರತಿಯೊಬ್ಬ ಗೃಹಿಣಿಗೂ ಮಾಸಿಕ ತಲಾ ಎರಡು ಸಾವಿರ ರೂಪಾಯಿಗಳಂತೆ ನೀಡಲಾಗುವುದು. ಇನ್ನೂರು ಯುನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಲಾಗುವುದು. ಚಹಾ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕನಿಷ್ಠಕೂಲಿಯನ್ನು 365 ರೂಪಾಯಿಗಳನ್ನಾಗಿ ಮಾಡುತ್ತೇವೆ. ಸರಕಾರೀ ಕ್ಷೇತ್ರದಲ್ಲಿ ಐದು ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಠಿಸುತ್ತೇವೆ ಎಂಬಿತ್ಯಾದಿ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.

ಪ್ರಣಾಳಿಕೆಯನ್ನು ಬಿಡುಗಡೆಗೊಳಿಸುತ್ತಾಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಬಿಜೆಪಿ ಮತ್ತು ಆರೆಸ್ಸೆಸ್ ಗಳು ನಾಶಪಡಿಸುತ್ತಿವೆಅವರನ್ನು ನಾವು ಎದುರಿಸುವೆವು. ಅಸ್ಸಾಮಿನ ಸಂಸ್ಕೃತಿ ಮತ್ತು ಅಸ್ಮಿತೆಯನ್ನು ಕಾಂಗ್ರೆಸ್ ಸಂರಕ್ಷಿಸುವುದು. ನಾವು ದ್ವೇಷವನ್ನು ಅಳಿಸಿ, ಶಾಂತಿಯನ್ನು ತರಲಿದ್ದೇವೆ.” ಎಂದು ರಾಹುಲ್ ಹೇಳಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು