ಈಜಲು ಇಳಿದ 7 ಯುವಕರು ನೀರುಪಾಲು!ಇಬ್ಬರ ಮೃತದೇಹ ಪತ್ತೆ, ಮುಂದುವರಿದ ಶೋಧ

penna river
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಡಪ(18-12-2020): ತಿರುಪತಿಯ ಏಳು ಯುವಕರು ನಿನ್ನೆ ಸಂಜೆ ಸಿದ್ದವಟಂನ ಪೆನ್ನಾ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ.

ಪೊಲೀಸರು ಮತ್ತು ಈಜುಗಾರರ ಶೋಧ ಕಾರ್ಯಾಚರಣೆಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಇಬ್ಬರ ಶವಗಳು ಪತ್ತೆಯಾಗಿದ್ದು, ಘಟನೆ ವರದಿಯಾದ ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.

ಸೋಮಶೇಖರ್ ಮತ್ತು ರಾಜೇಶ್ ಎಂಬವರ ಮೃತದೇಹ ಸಿಕ್ಕಿದೆ. ಪೊಲೀಸ್ ವರಿಷ್ಠಾಧಿಕಾರಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಶಿವ ಎಂಬ ಯುವಕನ ತಂದೆ ಕಳೆದ ವರ್ಷ ಮೃತಪಟ್ಟಿದ್ದರು. ಅವರ ವರ್ಷದ ಕಾರ್ಯಕ್ಕೆ ತಿರುಪತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಿವ ತನ್ನ ಸ್ನೇಹಿತರೊಂದಿಗೆ ಮನೆಗೆ ಬಂದು ಬಳಿಕ ಪೆನ್ನಾ ನದಿಯಲ್ಲಿ ಈಜಲು ತೆರಳಿದ್ದ. ಈ ವೇಳೆ ದುರ್ಘಟನೆ ನಡೆದಿದೆ. ಇತರ ಐದು ಶವಗಳನ್ನು ಪತ್ತೆಹಚ್ಚಲಾಗಲಿಲ್ಲ. ಭಾರಿ ಮಳೆ ಮತ್ತು ಗಾಳಿ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆಯನ್ನು ರಕ್ಷಣಾ ಪಡೆಗಳು ಮುಂದುವರಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು