ಪೆಟ್ರೋಲ್ 100 – ನಾಟ್ ಔಟ್’ : ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ದೇಶದಲ್ಲಿ ಇಂಧನ ದರ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಹಾಕುತ್ತಿರುವ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ವಿರೋಧಿ ಘೋಷಣೆ ಕೂಗುತ್ತಾ, ಕೊರಳಲ್ಲಿ ಬೋರ್ಡ್ ಗಳು ನೇತಾಕಿಕೊಂಡು ಪೆಟ್ರೋಲ್ ಬಂಕ್ ಮುಂದೆ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು