ಪೈಪ್ ಲೈನ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ; ಇಬ್ಬರು ಸಾವು, 6ಕ್ಕೂ ಅಧಿಕ ಮಂದಿ ಗಂಭೀರ

dead
Share on facebook
Share on twitter
Share on linkedin
Share on whatsapp
Share on telegram
Share on email
Share on print

ಒಡಿಶಾ(11-10-2020): ಒಡಿಶಾದ ಪುರಿ ಜಿಲ್ಲೆಯ ಹಳ್ಳಿಯಲ್ಲಿ ಭಾನುವಾರ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಹ್ಮಗಿರಿ ಪೊಲೀಸ್ ಠಾಣೆ ಪ್ರದೇಶದ ದಿಮಿರಿಸೇನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡು ಕುಟುಂಬಗಳ ನಡುವೆ ನೀರಿನ ಪೈಪ್‌ಲೈನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಹಿಂಸೆಗೆ ತಿರುಗಿದೆ.

ಎರಡು ಕುಟುಂಬಗಳ ಸದಸ್ಯರು ಕೊಡಲಿ ಸೇರಿದಂತೆ ತೀಕ್ಷ್ಣವಾದ ಶಸ್ತ್ರಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದು, ಇಬ್ಬರು ಮೃತಪಟ್ಟಿದ್ದಾರೆಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಕೆ.ಸಿ.ಮಂಡ್ ಹೇಳಿದ್ದಾರೆ.

ಹಿಂಸಾತ್ಮಕ ಘರ್ಷಣೆಯಲ್ಲಿ ಸುಮಾರು ಹತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.

ಘಟನೆ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ತಂಡವು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳಕ್ಕೆ ಧಾವಿಸಿತ್ತು. ಮೃತರನ್ನು ಕಾಲಿಯಾ ಭೋಯ್ ಮತ್ತು ಸುರೇಂದ್ರ ಭೋಯ್ ಎಂದು ಗುರುತಿಸಲಾಗಿದೆ, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು