ನಿತೀಶ್ ಕುಮಾರ್ ರ `8-9 ಮಕ್ಕಳನ್ನು ಹೆತ್ತವರು’ ಹೇಳಿಕೆಗೆ ತೇಜಸ್ವಿ ಯಾದವ್ ತಿರುಗೇಟು

tejasvi yadavu
Share on facebook
Share on twitter
Share on linkedin
Share on whatsapp
Share on telegram
Share on email
Share on print

ಪಟ್ನಾ(27/10/2020): ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ‘ಒಬ್ಬ ಮಗನನ್ನು ಪಡೆಯಲು 8-9 ಮಕ್ಕಳನ್ನು ಹಡೆದವರಿಂದ ಯಾವುದೇ ಅಭಿವೃದ್ಧಿಯನ್ನು ನಿರೀಕ್ಷಿಸಲಾಗುವುದಿಲ್ಲ’ ಎಂಬ ಹೇಳಿಕೆಗೆ ಲಾಲು ಪುತ್ರ ಹಾಗೂ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ತನ್ನದೇ ಆದ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ.

ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು  ‘5-6 ಸಹೋದರರು ಮತ್ತು ಸಹೋದರಿಯರನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ನಿತೀಶ್‌ ಅವರು ಇಂತಹ ಮಾತುಗಳನ್ನು ಆಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

‘ಜೆಡಿಯು ನಾಯಕ ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದಾರೆ. ನಿತೀಶ್‌ ಅವರ ನಿಂದನೆಯನ್ನು ನಾನು ಆಶೀರ್ವಾದವೆಂದು ಭಾವಿಸುತ್ತೇನೆ. ಇದು ನನ್ನ ತಾಯಿ ಮತ್ತು ಇತರ ಮಹಿಳೆಯರ ಅಪಮಾನವೂ ಹೌದು’ ಎಂದು ತೇಜಸ್ವಿ ಯಾದವ್ ನಿತೀಶ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು