ಬೆಂಗಳೂರು(21/10/2020): ಡ್ರಗ್ ಮಾಫಿಯಾಗಳನ್ನು ಮಟ್ಟ ಹಾಕಲು ಸರ್ಕಾರ ಕಟಿಬದ್ದವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಅವರು ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಇಂದು ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದರು.
ಪೊಲೀಸರಿಗೆ ವಸತಿ ಸೇರಿದಂತೆ ಎಲ್ಲಾ ರೀತಿಯ ಸವಲತ್ತುಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಪೊಲೀಸರು ಮತ್ತಷ್ಟು ಕರ್ತವ್ಯ ನಿಷ್ಠೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಲಿ ಎಂದು ಯಡಿಯೂರಪ್ಪ ಹೇಳಿದ್ದಾರೆ.