ಮಂಗಳೂರು(07-11-2020): ಯುವಕ ಪ್ರೀತಿಸುವಂತೆ ಪೀಡಿಸುತ್ತಿದ್ದಾನೆ ಎಂದು ಪೊಲೀಸ್ ಠಾಣೆಗೆ ದೂರು ನಿಡಲು ಹೋದ ಬಾಲಕಿಗೆ ಮಹಿಳಾ ಪೊಲೀಸ್ ಸಿಬ್ಬಂದಿ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಯುವಕನ ಕಿರಿಕ್ ತಾಳಲಾರದೆ 16 ವರ್ಷದ ಬಾಲಕಿ ಹಾಗೂ ಆಕೆಯ ಪೋಷಕರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಮಹಿಳಾ ಪೊಲೀಸ್ ಪೇದೆ ಯುವತಿಗೆ ಲಾಠಿಯಿಂದ ಥಳಿಸಿದ್ದಾರೆ.
ಪೇದೆ ವಿರುದ್ಧ ಇದೀಗ ಯುವತಿಯ ಪೋಷಕರು ದೂರು ದಾಖಲಿಸಿದ್ದು, ಸಿಡಬ್ಲ್ಯುಸಿ ತಂಡದವರು ಕೂಡ ಬಾಲಕಿಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ.