ಹಾಸನ(04-11-2020): ಪಿಎಸ್ಐ ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ರೌಡಿ ಶೀಟರ್ ಸುನಿಲ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಸುನಿಲ್ ಗೆ ಹಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.ಅರೆಕಲ್ಲು ಹೊಸಹಳ್ಳಿಯ ಸುನಿಲ್ ವಿರುದ್ಧ ಏಳು ಪ್ರಕರಣ ದಾಖಲಾಗಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲು ತೆರಳಿದ ಪಿಎಸ್ಐ ಮೇಲೆ ಸುನಿಲ್ ಚಾಕುವಿನಿಂದ ಹಲ್ಲೆ ಮಾಡಿದ್ದ. ಪಿಎಸ್ ಐ ಬಸವರಾಜ್ ಅವರ ಹೊಟ್ಟೆ ಮತ್ತು ಎಡಗೈಗೆ ಗಂಭೀರ ಗಾಯವಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಾಂತರ ವೃತ್ತದ ಸಿಪಿಐ ಪಿ.ಸುರೇಶ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.