ಉತ್ತರ ಪ್ರದೇಶ 14/10/2020: ಪರಿಶಿಷ್ಠ ಜಾತಿಯ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕಾರ್ವಿ ಪೊಲೀಸ್ ಠಾಣೆಯ ಸರಿಯಾಯ ಪೊಲೀಸ್ ಔಟ್ಪೋಸ್ಟ್ ಉಸ್ತುವಾರಿ ಸಬ್ ಇನ್ಸ್ಪೆಕ್ಟರ್ ಅನಿಲ್ ಸಾಹು ಮತ್ತು ಎಸ್ಎಚ್ಒ ಜೈಶಂಕರ್ ಸಿಂಗ್ ಅವರನ್ನು ಅಮಾನತುಗೊಳಿಸಿರುವುದಾಗಿ ಚಿತ್ರಕೂಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ;ದಂತೆ ಗ್ರಾಮದ ಮಾಜಿ ಪ್ರಧಾನನೊಬ್ಬರ ಮಗ ಮತ್ತು ಇಬ್ಬರನ್ನು ಮಂಗಳವಾರ ಬಂಧಿಸಲಾಗಿದೆ.