ಸಚಿವ ಸೋಮಶೇಖರ್ ಪುತ್ರನ ಬ್ಲ್ಯಾಕ್ ಮೇಲ್ ಪ್ರಕರಣ: ಸಿಸಿಬಿ ಯಿಂದ ಭಾರೀ ವಿಚಾರಣೆ.

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್ ಸಂಬಂಧ ಬಂಧನಕ್ಕೆ ಒಳಗಾಗಿರುವ ರಾಹುಲ್ ಭಟ್‍ನ ವಿಚಾರಣೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಇದುವರೆಗೂ ಎಂಟು ಮಂದಿಯ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.

ಸಚಿವ ಎಸ್.ಟಿ.ಸೋಮಶೇಖರ್, ಪುತ್ರ ನಿಶಾಂತ್, ಆಪ್ತ ಕಾರ್ಯದರ್ಶಿಗಳಾದ ಭಾನುಪ್ರಕಾಶ್, ಶ್ರೀನಿವಾಸ್ ಗೌಡ, ಇಂಡಿ ಶಾಸಕ ಯಶವಂತರಾಯ್ ಪಾಟೀಲ್ ಮತ್ತು ಅವರ ಪುತ್ರಿ, ಆರೋಪಿ ರಾಹುಲ್ ಭಟ್‍ಗೆ ಸಿಮ್ ಕೊಟ್ಟಿದ್ದ ಎನ್ನಲಾಗಿರುವ ಮುಂಬೈನ ರಾಕೇಶ್ ಹೇಳಿಕೆ ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬಂಧನಕ್ಕೊಳಗಾಗಿರುವ ಆರೋಪಿ ರಾಹುಲ್ ಭಟ್‍ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅದೇ ರೀತಿ, ಜಪ್ತಿ ಮಾಡಿಕೊಂಡಿದ್ದ ಮೊಬೈಲ್ ಪರಿಶೀಲನೆ ನಡೆಸಿದಾಗ ನಿಶಾಂತ್‍ಗೆ ಸಂಬಂಧಿಸಿದ ವಿಡಿಯೊ ಪತ್ತೆಯಾಗಿರುವುದು ಕಂಡುಬಂದಿದೆ. ಕಡತ ಸಂಗ್ರಹಕ್ಕಾಗಿ ಮೊಬೈಲ್ ಅನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು