ಗೋಹತ್ಯಾ ನಿಷೇಧ ಕಾಯ್ದೆಯಡಿ ಮೊದಲ ಬಂಧನ

prabu chauan
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(23-01-2021): ಗೋಹತ್ಯೆ ನಿಷೇಧ ಕಾಯ್ದೆಯಡಿ ಕರ್ನಾಟಕ ರಾಜ್ಯದಲ್ಲಿ ಮೊದಲ ಬಂಧನವಾಗಿದೆ.

ಈ ಕುರಿತು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಮಾಹಿತಿ ನೀಡಿದ್ದು, ವಿಜಯಪುರ ಜಿಲ್ಲೆಯ ಕೂಡಗಿಯ ಸಿಖಂದರ್ಸಾಬ್ ರಾಜಾಸಾಬ್ (35) ಎಂಬ ಆರೋಪಿಯನ್ನು ನೂತನ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ರಾಜಾಸಾಬ್ ಕೂಡಗಿ ಗ್ರಾಮದ ರೈಲ್ವೆ ಹಳಿ ಹತ್ತಿರದ ಖಾಸಗಿ ಶೆಡ್ ವೊಂದರಲ್ಲಿ ಎತ್ತೊಂದನ್ನು ಕತ್ತರಿಸಿ ಮಾಂಸ ಮಾರಾಟದಲ್ಲಿ ತೊಡಗಿದ್ದ. ಈ ವೇಳೆ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೂಡಗಿ ಪಿಎಸ್‌ಐ ರೇಣುಕಾ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

 

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು