ನವದೆಹಲಿ(03-12-2020): ಕೇಂದ್ರದ ಕೃಷಿ ಮಸೂದೆಯನ್ನು ವಿರೋಧಿಸಿ, ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಹಿಂತಿರುಗಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿರುವ ಬಾದಲ್, ಪದ್ಮಭೂಷಣ ಪ್ರಶಸ್ತಿಯನ್ನು ಹಿಂತಿರುಗಿಸುವುದಾಗಿ ಹೇಳಿದ್ದಾರೆ.2015ರಲ್ಲಿ ಪ್ರಕಾಶ್ ಸಿಂಗ್ ಬಾದಲ್ ಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ವಿಭೂಷಣವನ್ನು ನೀಡಲಾಗಿತ್ತು.
ದೆಹಲಿ ಚಲೋ ರೈತರ ಪ್ರತಿಭಟನೆಗೆ ದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ಮಧ್ಯೆ ಮಾಜಿ ಸಿಎಂ ಈ ನಿರ್ಧಾರ ಪ್ರಕಟಿಸಿದ್ದಾರೆ.