ಹೊಸದೆಹಲಿ(15/11/2020): ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಿಪಬ್ಲಿಕ್ ಟಿ.ವಿ. ಸಂಪಾದಕ ಅರ್ನಾಬ್ ಗೋಸ್ವಾಮಿ ಪ್ರಕರಣವನ್ನು ಒಂದೇ ದಿನದಲ್ಲಿ ಕೈಗೆತ್ತಿ ಶೀಘ್ರದಲ್ಲಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್ ಬಗ್ಗೆ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.
‘ನ್ಯಾಯಾಲದ ಅನುಕಂಪಕ್ಕಾಗಿ ಕಾಯುತ್ತಿರುವ ಸಾಮಾಜಿಕ ಕಾರ್ಯಕರ್ತರ, ಬರಹಗಾರರ ಹಾಗೂ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ’ ಎಂದು ಬರೆದು ದಿ ವಯರ್ ನವಂಬರ್ 13ರಲ್ಲಿ ಪ್ರಕಟಿಸಿರುವ ಲೇಖನವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.
ಅರ್ನಾಬ್ ಗೋಸ್ವಾಮಿಯ ಅರ್ಜಿ ಇತ್ಯರ್ಥಗೊಳಿಸಲು ಅವಸರ ತೋರಿದ ನ್ಯಾಯಾಂಗದ ಮುಂದೆ ಅದರ ಅನುಕಂಪಕ್ಕೆ ಕಾಯುತ್ತಿರುವ ಸಾಮಾಜಿಕ ಹೋರಾಟಗಾರರು, ಬರಹಗಾರರು, ಪತ್ರಕರ್ತರು ಹಾಗೂ ವಿದ್ಯಾರ್ಥಿಗಳ ಪಟ್ಟಿಯಿದು. ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಯುವ ಪ್ರಯತ್ನ ಮಾಡಿದ್ದಕ್ಕಾಗಿ ಇವರು ಈ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.