ಹುಬ್ಬಳ್ಳಿ(02-03-2021): ಒಂದರಿಂದ ಐದನೇ ತರಗತಿವರೆಗೆ ಶಾಲೆ ಮತ್ತೆ ಆರಂಭಿಸುವ ಬಗ್ಗೆ ಮಹತ್ವದ ಹೇಳಿಕೆಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿದ್ದು, ಪ್ರಾಥಮಿಕ ಶಾಲಾ ತರಗತಿ ಆರಂಭದ ಬಗ್ಗೆ ಆರೋಗ್ಯ ಇಲಾಖೆಯ ತಜ್ಞರ ವರದಿ ಆಧರಿಸಿ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪ್ರಾಥಮಿಕ ಶಾಲಾ ತರಗತಿಯನ್ನು ಆರಂಭಿಸಲು ಒತ್ತಡ ಕೇಳಿ ಬರುತ್ತಿದೆ. ವಿವಿಧ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ರಾಜ್ಯದಲ್ಲೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ತರಗತಿ ಆರಂಭಿಸಿದರೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ತಜ್ಞರು ವರದಿ ನೀಡಲಿದ್ದಾರೆ. ಬಳಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.