ನವದೆಹಲಿ (04-10-2020): ಹತ್ರಾಸ್ ಗೆ ತೆರಳುತ್ತಿದ್ದ ದಾರಿ ಮಧ್ಯೆ ಕಾಂಗ್ರೆಸ್ ನಾಯಕರಾದ ರಾಹುಲ್, ಪ್ರಿಯಾಂಕಾ ಗಾಂಧಿ ಜೊತೆ ಅನುಚಿತವಾಗಿ ವರ್ತಿಸಿದ ಉತ್ತರಪ್ರದೇಶ ಪೊಲೀಸರು ಕೊನೆಗೆ ಕಾಂಗ್ರೆಸ್ ನಾಯಕರ ಕ್ಷಮೆ ಕೋರಿದ್ದಾರೆ.
ಪ್ರಿಯಾಂಕ ಗಾಂಧಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿತ್ತು. ಈ ಮಧ್ಯೆ ಅನುಚಿತ ವರ್ತನೆ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನೋಯ್ಡಾ ಪೊಲೀಸ್ ಆಯುಕ್ತರು ಹೇಳಿದ್ದಾರೆ.
ಅತ್ಯಾಚಾರ ಸಂತ್ರಸ್ತೆಯನ್ನು ಭೇಟಿಯಾಗಲು ರಾಹುಲ್ ಗಾಂಧಿ ಮೊನ್ನೆ ತೆರಳಿದಾಗ ನೋಯ್ಡಾದಲ್ಲಿ ಯೋಗಿ ಪೊಲೀಸರು ತಡೆದಿದ್ದರು, ನನ್ನ ಮೇಲೆ ಹಲ್ಲೆಯಾಗಿದೆ ಎಂದು ಕೂಡ ರಾಹುಲ್ ಗಾಂಧಿ ಹೇಳಿಕೆಯನ್ನು ನೀಡಿದ್ದರು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯ ಕಾಲರ್ ಪಟ್ಟಿ ಹಿಡಿದು ಪೊಲೀಸರು ಅನುಚಿತವಾಗಿ ವರ್ತಿಸುವ ವಿಡಿಯೋ, ಪೋಟೋಗಳು ಕೂಡ ವೈರಲ್ ಆಗಿತ್ತು.