ಲಕ್ನೋ(04-02-2021): ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಭದ್ರತಾ ವಾಹನಗಳು ಭೀಕರ ಅಪಘಾತವಾಗಿರುವ ಘಟನೆ ಉತ್ತರಪ್ರದೇಶದ ಹಾಪುರ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಂಪುರಕ್ಕೆ ಪ್ರಿಯಾಂಕ ಗಾಂಧಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.
ದೆಹಲಿ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ರೈತ ನವರಿತ್ ಸಿಂಗ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ರಾಂಪುರಕ್ಕೆ ತೆರಳುತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.