ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಉಪ್ಪಿನಂಗಡಿ:ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ)  ನಾಯಕರನ್ನು ಅಕ್ರಮವಾಗಿ ಬಂಧಿಸಿದ ಹಿನ್ನಲೆ ಸಂಘಟನೆಯ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ಪಿಎಫ್ಐ ಸ್ಥಳೀಯ ನಾಯಕರಾದ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಮುಸ್ತಫಾ ಕಡವಿನಬಾಗಿಲು, ಝಕರಿಯಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ತಲವಾರು ದಾಳಿಯಲ್ಲಿ ನಿರಪರಾಧಿಗಳಿಗೆ ಅನ್ಯಾಯವಾಗಬಾರದೆಂಬ ಹಿನ್ನೆಲೆಯಲ್ಲಿ ಪೊಲೀಸರ ಜೊತೆ ಮಾತನಾಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು ಈ ಮೂವರು ಮುಖಂಡರನ್ನು ಠಾಣೆಯಲ್ಲಿ ಕೂರಿಸಿ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದ್ದಾರೆ‌. ಸ್ಥಳದಲ್ಲಿ ಸಂಘಟನೆಯ ಕಾರ್ಯಕರ್ತರು ನಾಯಕರನ್ನು ಬಿಡುಗಡೆಗೊಳಿಸುವವರೆಗೂ ಪ್ರತಿಭಟನೆಯಿಂದ ಹಿಮದೆ ಸರಿಯಲ್ಲ ಎಂದು ಪಟ್ಟು ಹಿಡಿದಿದ್ದಾರೆ

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು