ಹಗರಿಬೊಮ್ಮನಹಳ್ಳಿ(03-10-2020): ದಲಿತ ಯುವತಿ ಮನೀಷಾ ವಾಲ್ಮೀಕಿ ಅತ್ಯಾಚಾರ ಪ್ರಕರಣ ಹೃದಯವಿದ್ರಾವಕ ಹಿಂಸಾತ್ಮಕ ಘಟನೆ. ಈ ಘಟನೆ ಅಲ್ಲಿನ ಸರ್ಕಾರದ ತೀವ್ರ ನಿರ್ಲಕ್ಷ್ಯ ಧೋರಣೆಯಿಂದ ನಡೆದಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಜಿ ಸರೋಜ ಆರೋಪಿಸಿದರು.
ಪಟ್ಟಣದ ಬಸವೇಶ್ವರ ವೃತ್ತ ಬಳಿ ಜನವಾದಿ ಮಹಿಳಾ ಸಂಘಟನೆ ಹಾಗೂ ಎಸ್ಎಫ್ಐ ಸಂಘಟನೆಯ ಜಂಟಿ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಜಿ. ಸರೋಜರವರು, ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ರಕ್ಷಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಎಸ್ ಐಎಫ್ ನ ಜಿಲ್ಲಾಧ್ಯಕ್ಷ ದೊಡ್ಡಬಸಪ್ಪ, ದಿನನಿತ್ಯ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗುತ್ತಿತ್ತು ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರು ಕೊಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸ್ ಹುಲಿಗೆಮ್ಮ, ಬಿ. ರೇಣುಕಾ, ಯು ಶಂಕ್ರಮ್ಮ, ಅಬ್ದುಲ್, ಜಯಸೂರ್ಯ, ಲಕ್ಷಣ ಅಲ್ಲದೇ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.