ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯು ಪರೀಕ್ಷೆಯ ನಡೆಯುತ್ತಾ,ರದ್ದಾಗುತ್ತಾ.. ಎಂಬ ಕುತೂಹಲಕ್ಕೆ ಕೊನೆಗೆ ತೆರೆ ಬಿದ್ದಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸಲಾಗಿದೆ ಎಂದು
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಘೋಷಣೆ ಮಾಡಿದ್ದಾರೆ.

ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡದೇ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಪ್ರಥಮ ಪಿಯುಸಿ ಮಕ್ಕಳ ಗ್ರೇಡ್ ಆಧರಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡಲಾಗುವುದು ಎಂದಿದ್ದಾರೆ. ಗ್ರೇಡ್ ಬಗ್ಗೆ ಸಮಾಧಾನ ಇಲ್ಲದವರಿಗೆ ಕೋವಿಡ್ ನಂತರ ಪರೀಕ್ಷೆ ಬರೆಯಲು ಅವಕಾಶನೀಡಲಾಗಿದೆ.

ಹತ್ತನೇ ತರಗತಿಗೆ ಎರಡು ಪರೀಕ್ಷೆಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಗಣಿತ ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಮೂರು ವಿಷಯಗಳ ಒಟ್ಟು 120 ಅಂಕಗಳ ಪತ್ರಿಕೆ, ಇನ್ನೊಂದು ಐಚ್ಛಿಕ ವಿಷಯ ಪತ್ರಿಕೆ ಇರುತ್ತದೆ, ಎರಡೂ ಪತ್ರಿಕೆಗಳು ಬಹುಆಯ್ಕೆ ಪ್ರಶ್ನೆಗಳು ಇರುತ್ತವೆ ಎಂದು ಹೇಳಿದ್ದಾರೆ.

ಅತ್ಯಂತ ಸರಳವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆಗಳು ನಡೆದಿವೆ, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ N-95 ಮಾಸ್ಕ್ ನೀಡಲಾಗುವುದು ಹಾಗೂ ಪರೀಕ್ಷಾ ಮೇಲ್ವಿಚಾರಕರಿಗೆ ಕಡ್ಡಾಯ ಲಸಿಕೆ ಹಾಕಿಸಲಾಗುತ್ತದೆ, ಮಾದರಿ ಪ್ರಶ್ನೆ ಪತ್ರಿಕೆಳನ್ನು ಇಲಾಖೆ ವೆಬ್ಸೈಟ ನಲ್ಲಿ ಪ್ರಕಟವಾಗುತೇವೆ
ಎಂದು ಸಚಿವರು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಇಪ್ಪತ್ತು ದಿನ ಮುಂಚೆಯೇ ತಿಳಿಸಲಾಗುವುದು, ಜುಲೈ ಎರಡನೆಯ ವಾರದಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಕೊನೆಯ ವಾರ ಅಥವಾ ಆಗಷ್ಟ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದರು.

ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಸಮರ್ಪಕವಲ್ಲ ಎಂದು ತೀರ್ಮಾನಿಸಿದ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಪಿಯುಸಿ ಪರೀಕ್ಷೆ ನಡೆಸಲು ಹೆಚ್ಚಿನ ಕಾಲಾವಕಾಶ ಬೇಕಾಗುತ್ತದೆ. ಅದು ಸಾಧ್ಯ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದು ಗೊತ್ತಾಗುತ್ತಿದೆ. ಒಟ್ಟಾರೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪರೀಕ್ಷೆಗಳ ಬಗ್ಗೆ ಇರುವ ಗೊಂದಲಗಳಿಗೆ ಸದ್ಯಕ್ಕೆ ರಿಲೀಫ್ ದೊರಕಿದೆ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದ ನಿರ್ಧಾರ ಏನೊ ಸರಿ ಇರಬಹುದು, ಆದರೆ ಪೋಷಕರಿಗೆ, ವಿದ್ಯಾರ್ಥಿಗಳಿಗೆ ಇದು ಎಷ್ಟು ಗೊಂದಲ ಮೂಡಿಸುತ್ತದೆ ಎಂಬುದು ಕಾದುನೋಡಬೇಕಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು