ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡಿ : ರಾಜ್ಯ ಸರ್ಕಾರಕ್ಕೆ ಎಚ್.ಡಿ.ಕೆ ಮನವಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಮೇ ತಿಂಗಳ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ತೆಗೆದುಕೊಂಡಿರುವ ತೀರ್ಮಾನದ ಜೊತೆಗೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು.
ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ ಎಚ್.ಡಿ.ಕೆ ಆಗ್ರಹಿಸಿದ್ದಾರೆ.

ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ.
ಸರಿಸುಮಾರು ₹  2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ  2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು. ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕೋರಿದ್ದಾರೆ.

ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು