ಪುನೀತ್ ಮನವಿಗೆ ಸ್ಪಂದಿಸಿದ ಸಿಎಂ: ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಚಿತ್ರರಂಗದ ಒಗ್ಗಟ್ಟಿನ ಹೋರಾಟದ ಫಲವಾಗಿ ಸರ್ಕಾರ ಕೊನೆಗೂ ಯುಟರ್ನ್ ಹೊಡೆದಿದೆ. ಎಪ್ರಿಲ್ 7 ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ.

ರಾಜ್ಯ ಸರ್ಕಾರ ನೂತನ ಕೊರೋನಾ ಮಾರ್ಗಸೂಚಿಯನ್ನು ಹೊರಡಿಸಿತ್ತು. ಇದರಲ್ಲಿ ಬೆಂಗಳೂರು ನಗರ ಸೇರಿ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶವಿತ್ತು. ಇದರಿಂದ ಏಪ್ರಿಲ್ 1ರಂದು ತೆರೆಕಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ “ಯುವರತ್ನ” ಚಿತ್ರ ಪ್ರದರ್ಶನಕ್ಕೆ ಅಡ್ಡಿಯಾಗಿತ್ತು.

ಈ ರೀತಿಯ ಆದೇಶದ ಕುರಿತು ಮೊದಲೇ ಗೊತ್ತಿದ್ದರೆ ನಾವು ಸಿನಿಮಾನೇ ಬಿಡುಗಡೆ ಮಾಡುತ್ತಿರಲಿಲ್ಲ ಎಂದು ಪುನೀತ್ ರಾಜಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರನ್ನು ಭೇಟಿ ಮಾಡಿದ್ದ ಪುನೀತ್ ರಾಜಕುಮಾರ್ ಒಳಗೊಂಡ “ಯುವರತ್ನ” ಚಿತ್ರತಂಡ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿತ್ತು. ಚಿತ್ರಮಂದಿರದಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ನೀಡಿದ ಆದೇಶವನ್ನು ಹಿಂಪಡೆಯುವಂತೆ ಚಿತ್ರತಂಡ ಮನವಿ ಮಾಡಿತ್ತು. ಅಲ್ಲದೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಸಹ ಈ ಸಂಬಂಧ ಆಗ್ರಹಿಸಿದ್ದರು.

ಚಿತ್ರತಂಡದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಹಾಗೂ ಸಚಿವರು ಚಿತ್ರಮಂದಿರದ ಆದೇಶ ಹಿಂಪಡೆದು, ಸಧ್ಯ ಏಪ್ರಿಲ್ 7ರವರೆಗೆ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು