ಪುನೀತ್ ರಾಜಕುಮಾರ್ ಗೆ ಹೃದಯಾಘಾತ ಆಸ್ಪತ್ರೆಗೆ ದಾಖಲು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ‘ಪವರ್ ಸ್ಟಾರ್‌’ ಪುನೀತ್ ರಾಜ್‌ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಕಾರಣ, ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಮುಂಜಾನೆ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರಿಗೆ ತಕ್ಷಣವೇ ಚಿಕಿತ್ಸೆ ಕೊಡಿಸಲಾಗುತ್ತಿದೆ! ಆದರೆ, ಪುನೀತ್‌ ಅವರಿಗೆ ಯಾವ ರೀತಿಯ ಆರೋಗ್ಯ ಸಮಸ್ಯೆ ಕಾಡುತ್ತಿದೆ ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ!

ಆದರೆ ಸದ್ಯ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಪುನೀತ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ತೀವ್ರವಾಗಿ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಚಿತ್ರರಂಗದ ನಿರ್ಮಾಪಕರು, ನಟರು ಸೇರಿದಂತೆ ಅಭಿಮಾನಿಗಳು ವಿಕ್ರಮ್ ಆಸ್ಪತ್ರೆಗೆ ದೌಡಾಯಿಸಿದ್ದು, ಪುನೀತ್ ರಾಜಕುಮಾರ್ ಶೀಘ್ರ ಗುಣಮುಖರಾಗಿ ಬರಲೆಂದು ಎಲ್ಲರೂ ಹಾರೈಸುತ್ತಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು