ಪುತ್ತೂರು(02/11/2020): ಪುತ್ತೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಕ್ಕಳು, ಮತ್ತು ಓರ್ವ ಮಹಿಳೆಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಬಾಲಕಿಯೊರ್ವಳು ಮೃತಪಟ್ಟಿದ್ದು, ಇನ್ನೋರ್ವ ಬಾಲಕಿ ಮತ್ತು ಮಹಿಳೆ ಗಂಭೀರ ಗಾಯಗೊಂಡಿದ್ದರು.
ಇಂದು ಗಂಭೀರ ಗಾಯಗೊಂಡಿದ್ದ ದರ್ಬೆ ನಿವಾಸಿ ಗೀತಾ ರವರೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.