ಕಟಿಹಾರ್(03/11/2020): ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರವನ್ನು ‘ಲೂಟಿ ಮಾಡಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಚುನಾವಣಾ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ಅವರನ್ನು ಅಧಿಕಾರದಿಂದ ದೂರ ಉಳಿಸಲು ಮತ ಚಲಾಯಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
ನೋಟು ಅಮಾನ್ಯೀಕರಣ, ವಲಸೆ ಬಿಕ್ಕಟ್ಟು, ಜಿಎಸ್ಟಿ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ನಿರ್ವಹಣೆ ಮತ್ತು ಮೂರು ಹೊಸ ಕೃಷಿ ಕಾನೂನುಗಳ ವಿಚಾರವಾಗಿ ಎನ್ಡಿಎ ಸರ್ಕಾರವನ್ನು ರಾಹುಲ್ ಗಾಂಧಿ ಟೀಕಿಸಿದರು.