ಬೆಂಗಳೂರು(19-10-2020): ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಳ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಅ.20 ಮತ್ತು 21ಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.22ಕ್ಕೆ ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.