ಬೆಂಗಳೂರು: ಭಾರೀ ಮಳೆಯಿಂದ ಹಾನಿಗೊಳಗಾದವರಿಗೆ ಮುಖ್ಯಮಂತ್ರಿಯಿಂದ 25 ಸಾವಿರ ರೂ ಪರಿಹಾರ ಘೋಷಣೆ

yadiyurappa
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(24/10/2020):  ಕಳೆದ ರಾತ್ರಿ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಮಹಾಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪನವರು ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ 25 ಸಾವಿರ ರೂ. ಘೋಷಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಸಂತ್ರಸ್ತರಿಗೆ ತಕ್ಷಣವೇ ಪ್ರತಿ ಕುಟುಂಬಕ್ಕೆ 25 ಸಾವಿರ ಪರಿಹಾರವನ್ನು ಚೆಕ್ ಮೂಲಕ ನೀಡಬೇಕೆಂದು ಬಿಬಿಎಂಪಿ ಆಡಳಿತಾಧಿಕಾರಿ, ಆಯುಕ್ತರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು. ಮನೆ, ದವಸ-ಧಾನ್ಯ ಸೇರಿದಂತೆ ತಕ್ಷಣವೇ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಈ ಪರಿಹಾರ ಹಣದಿಂದ ಅನುಕೂಲವಾಗುತ್ತದೆ ಎಂದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು