ಬೆಂಗಳೂರು (10-10-2020): ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೀದರ್, ಕಲ್ಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಅ. 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.