ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಕುಮಾರಸ್ವಾಮಿ ಮತ್ತು ಸಿ ಎಂ ಇಬ್ರಾಹಿಮ್ ಭೇಟಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(8-12-2020): ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಸಿ.ಎಂ ಇಬ್ರಾಹಿಮ್ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಯೊಂದನ್ನು ಹುಟ್ಟು ಹಾಕಿದೆ. ಈಗಾಗಲೇ ಕಾಂಗ್ರೆಸ್ಸಿನಲ್ಲಿ ಅಷ್ಟಾಗಿ ಸಕ್ರಿಯವಾಗಿದೇ ದೂರವಾಗಿರುವ ಸಿ‌.ಎಂ ಇಬ್ರಾಹಿಮ್ ಮುಂದೆ ಜೆಡಿಎಸ್ ಸೇರಬಹುದೇ ಎಂಬ ಅನುಮಾನವನ್ನು ಹಲವರು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚೆಗೆ ಕುಮಾರಸ್ವಾಮಿಯವರು ಸಿದ್ಧರಾಮಯ್ಯ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದು, ಸಿದ್ಧರಾಮಯ್ಯ ಕೂಡಾ ತಕ್ಕುದಾದ ಪ್ರತಿಕ್ರಿಯೆ ನೀಡಿದ್ದರು. ಈ ನಡುವೆ ಉಂಟಾದ ಇಂತಹ ಹೊಸ ಬೆಳವಣಿಗೆಗಳು ರಾಜಕೀಯ ಆಸಕ್ತರ ಹುಬ್ಬೇರಿಸುವಂತೆ ಮಾಡಿದೆ.

ಜೊತೆಗೆ ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ಸಿನ ವರ್ಚಸ್ಸನ್ನು ಕುಂದಿದೆಯೆಂಬ ಹಲವು ರಾಜಕೀಯ ತಜ್ಞರ ಅನಿಸಿಕೆ ಹಿನ್ನೆಲೆಯಲ್ಲಿ ಹೊಸದಾಗಿ ಪ್ರಾದೇಶಿಕ ಪಕ್ಷಗಳಿಗೆ ಶಕ್ತಿ ತುಂಬುವ ಪ್ರಯತ್ನಗಳು ನಡೆಯುತ್ತಿವೆಯೇ ಎಂಬುದನ್ನು ಕಾದು ನೋಡಬೇಕಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು