ಪೂರ್ಣಚಂದ್ರ ತೇಜಸ್ವಿ ಪತ್ನಿ ನಿಧನ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ ಕವಿ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿ (85) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಜನಿಸಿದ ರಾಜೇಶ್ವರಿ ತೇಜಸ್ವಿಯವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ನ ತೋಟದ ಮನೆಯಲ್ಲಿ ವಾಸವಾಗಿದ್ದರು. ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ ಪದವಿ ಪಡೆದಿದ್ದಾರೆ.1966ರಲ್ಲಿ ಪೂರ್ಣಚಂದ್ರ ತೇಜಸ್ವಿ ಜೊತೆ ವಿವಾಹವಾಗಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು