ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ: ಬಿ.ಎಸ್.ಯಡಿಯೂರಪ್ಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇಂದು ಸಾಂಕೇತಿಕವಾಗಿ ಚಾಲನೆ ನೀಡಿದರು.

18 ವರ್ಷ ದಾಟಿದವರಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು‌.
ಕಾರ್ಯಕ್ರಮದ ನಂತರ ಮಾತನಾಡಿದ ಅವರು, ‘ಕೋವಿಡ್‌ ವಿರುದ್ಧ ಸಮರದಲ್ಲಿ ನನ್ನ ಪ್ರಕಾರ ಇಂದು ಮಹತ್ವದ ದಿನ. ಇಂದಿನಿಂದ ಕೇಂದ್ರದ ಸೂಚನೆಯಂತೆ 18 ವರ್ಷ ದಾಟಿದವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗುತ್ತಿದೆ’ ಎಂದರು.

18 ವರ್ಷ ದಾಟಿದ ಎಲ್ಲರಿಗೂ ಉಚಿತವಾಗಿ ನೀಡಲು ಲಸಿಕೆ ನೀಡಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಸದ್ಯ ಈ ಉದ್ದೇಶಕ್ಕೆ ಕೇಂದ್ರ ಸರ್ಕಾರದಿಂದ 3 ಲಕ್ಷ ಲಸಿಕೆ ಲಭ್ಯವಾಗಿದೆ.
ನಮ್ಮ ಬಳಿ 1 ಲಕ್ಷ ಹೆಚ್ಚು ಲಸಿಕೆ ಇದೆ. ಅದನ್ನು ಇವತ್ತಿನಿಂದ ಕೊಡಲು ಆರಂಭಿಸುತ್ತೇವೆ. 2 ಕೋಟಿ ಲಸಿಕೆ ಖರೀದಿಸಿದ್ದೇವೆ ಎಂದು ಹೇಳಿದರು.

‘ರಾಜ್ಯದಲ್ಲಿ 18 ವರ್ಷ ವಯೋಮಾನದ 3.26 ಕೋಟಿ ಜನರಿದ್ದಾರೆ. ಅವರೆಲ್ಲರಿಗೂ ಲಸಿಕೆ ಕೊಡಲು ಸರ್ಕಾರ ಉದ್ದೇಶಿಸಿದೆ. ಕೋವಿಡ್‌ ಎರಡನೇ ಅಲೆ ನಮ್ಮನ್ನು ತೀವ್ರವಾಗಿ ಕಾಡುತ್ತಿದೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ಈ ತೀರ್ಮಾನ ಅತ್ಯಂತ ಸಮಯೋಚಿತ. ಮಾನ್ಯ ಪ್ರಧಾನಿ ಅವರಿಗೆ ಅಭಿನಂದನೆಗೆ ಸಲ್ಲಿಸುತ್ತೇನೆ’ ಎಂದರು.

‘ಸ್ವದೇಶದಲ್ಲಿ ಉತ್ಪಾದನೆಯಾದ ಎರಡು ಲಸಿಕೆ ಈಗಾಗಲೇ ಲಭ್ಯವಾಗಿದ್ದು. ಇದೇ ತಿಂಗಳಲ್ಲಿ ಇನ್ನೊಂದು ಲಸಿಕೆ ಮಾರುಕಟ್ಟೆಗೆ ಬರಲಿದೆ. ರಾಜ್ಯದಲ್ಲಿ ಈಗಾಗಲೇ 96.35 ಲಕ್ಷ ಜನರಿಗೆ ಲಸಿಕೆ ಕೊಡಲಾಗಿದೆ. ಇದೀಗ 18 ವರ್ಷ ದಾಟಿದ ದೊಡ್ಡ ಸಂಖ್ಯೆಯ ಜನರಿಗೂ ದೊಡ್ಡ ಲಸಿಕೆ ದೊರೆತಂತಾಗುತ್ತದೆ’ .’ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಗೆ ನಿಗದಿಪಡಿಸಿದದರದೊಂದಿಗೆ ₹ 100 ಸೇವಾ ಶುಲ್ಲವನ್ನು ನಿಗದಿಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಲಭ್ಯತೆಯ ಆಧಾರದಲ್ಲಿ ಹಂತ ಹಂತವಾಗಿ ಲಸಿಕೆ ವಿತರಣೆ ಮುಂದುವರಿಸಲಾಗುವುದು’ ಎಂದರು.

ಕೋವಿಡ್‌ ನಿಂಯತ್ರಿಸಲು ಹೊರಡಿಸಿರುವ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸುವ ಮೂಲಕ ಸರ್ಕಾರದ ಜೊತೆ ಕೈ ಜೋಡಿಸಬೇಕು. ಮಾಸ್ಕ್, ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್‌ ಬಳಸಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು