ರಾಜ್ಯದಲ್ಲಿ 1ರಿಂದ 9ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ : ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಮಾಡಿ ಆದೇಶ ಹೊರಡಿಸಿತ್ತು. ಮಕ್ಕಳಿಗೆ ಪರೀಕ್ಷೆ ನಡೆಸಬೇಕಾ ಅಥವಾ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕಾ ಎನ್ನುವ ಗೊಂದಲದಲ್ಲಿದ್ದ ಶಿಕ್ಷಣ ಇಲಾಖೆ ಇಂದು ಪರೀಕ್ಷೆ ಇಲ್ಲದೆ ಮೌಲ್ಯಾಂಕನ ಆಧರಿಸಿ ಪಾಸ್ ಮಾಡುವ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ.

ಕೊರೊನಾ ಬಿಕ್ಕಟ್ಟಿನ ಇಂಥ ಕಠಿಣ ಸಂದರ್ಭದಲ್ಲಿ ರಾಜ್ಯದಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ನಡೆಸುವುದು ತುಂಬಾ ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ, 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ತಿಳಿಸಿ ಆದೇಶಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಾಗೂ ತಜ್ಞರ ಅಭಿಪ್ರಾಯಗಳನ್ನು ಆಧರಿಸಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.

1ರಿಂದ 9ನೇ ತರಗತಿ ಮಕ್ಕಳಿಗೆ ಶೈಕ್ಷಣಿಕ ಪ್ರಕ್ರಿಯೆಯ ಮೌಲ್ಯಾಂಕನ ಆಧಾರದ ಮೇಲೆ ಪಾಸ್ ಮಾಡಿ ಮುಂದಿನ ತರಗತಿಗೆ ಬಡ್ತಿ ನೀಡಬೇಕು, ಈ ಪ್ರಕ್ರಿಯೆಯನ್ನು ಎಪ್ರಿಲ್ 30ರ ಒಳಗಾಗಿ ಶಾಲಾ ಹಂತದಲ್ಲಿ ಮುಗಿಸಿ ಫಲಿತಾಂಶ ಪ್ರಕಟಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

1ರಿಂದ 7/8 ತರಗತಿ ಮಕ್ಕಳಿಗೆ ಮೇ 1ರಿಂದ ಜೂನ್ 14ವರೆಗೆ ಬೇಸಿಗೆ ರಜೆ, ಜೂನ್ 15 ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ, ಹಾಗೂ 8 ರಿಂದ 10ನೇ ತರಗತಿ ಮಕ್ಕಳಿಗೆ ಜುಲೈ 14 ವರೆಗೆ ಬೇಸಿಗೆ ರಜೆ ಜುಲೈ 15ರಿಂದ ಶೈಕ್ಷಣಿಕ ವರ್ಷ ಪ್ರಾರಂಭ ಎಸ್.ಎಸ್.ಎಲ್.ಸಿ.ಪರೀಕ್ಷೆಗಳು 21.6.2021 ರಿಂದ 5.7.2021 ವರೆಗೆ ನಡೆಯಲಿವೆ, ಈ ಎಲ್ಲಾ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಕೋವಿಡ್ ಮಾರ್ಗಸೂಚಿ ಅನ್ವಯ ಜಿಲ್ಲಾಡಳಿತ ನಿಯಮಗಳನ್ನು ಕಡ್ಡಾಯವಾಗಿರುತ್ತದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು