ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ ಯಡಿಯೂರಪ್ಪ ಸ್ಪಷ್ಟನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೀದರ್: ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದನ್ನು ತಡೆಗಟ್ಟಲು ಲಾಕ್ ಡೌನ್ ಜಾರಿ ಮಾಡಲು ಸಲಹಾ ಸಮಿತಿ ಸೂಚನೆ ನೀಡಿಲ್ಲ. ಸಮಿತಿಯಲ್ಲಿ ನಾನು ಇದ್ದೇನೆ. ಸಮಿತಿ ಆ ರೀತಿ ಸೂಚನೆ ನೀಡಿಲ್ಲ., ಸಲಹೆ ನೀಡಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿಕೆಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಇಂಥ ಪರಿಸ್ಥಿತಿಯ ಬಗ್ಗೆ ತಪ್ಪುಗಳನ್ನು ಹೇಳಬೇಡಿ ಎಂದು ತಿಳಿಸಿದ ಅವರು, ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಮುಂದೇನು ಮಾಡಬೇಕೆಂದು ತೀರ್ಮಾನ ಇನ್ನೂ ಮಾಡಲಾಗುವುದು. ಕೊರೋನಾ ಸೋಂಕು ಉಲ್ಬಣಗೊಳ್ಳದಂತೆ ರಾಜ್ಯದ ಜನತೆ ಸಹಕಾರ ನೀಡಬೇಕು. ಜನರು ಇದನ್ನು ಮರೆತರೆ ಮುಂದೆ ಅನಾಹುತ ಆಗಲಿದೆ ಎಂದು ಹೇಳಿದ್ದಾರೆ.

ಸರ್ವಪಕ್ಷ ಸಭೆಗೆ ಕರೆದಿದ್ದೇವೆ, ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಡಿಕೆ ಶಿವಕುಮಾರ್ ಬರುವುದಿಲ್ಲ ಎಂದು ಹೇಳುವುದು ಬೇಸರ ತಂದಿದೆ. ಈ ಹಿಂದೆ ಬರುತ್ತೇನೆ ಎಂದು ಈಗ ಬರುವುದಿಲ್ಲ ಎನ್ನುತ್ತಿದ್ದಾರೆ. ನಾವು ಕರೆದಿದ್ದೇವೆ ಬರುವುದು ಅವರಿಗೆ ಬಿಟ್ಟ ವಿಚಾರ ಎಂದು ಸಿಎಂ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು