ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಹೇರುವ ವಿಚಾರದಲ್ಲಿ ಸಚಿವರಿಂದ ಸ್ಪಷ್ಟನೆ

k sudhakar
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಹೇರಲಾಗುವುದೆಂಬ ವದಂತಿಯು ಕೆಲವು ದಿನಗಳಿಂದ ಹರಡಿತ್ತು. ಬಗ್ಗೆ ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಸಚಿವರಾದ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದು, ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಏರುತ್ತಿರುವ ಕೊರೋನಾ ಪ್ರಕರಣಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮಾಡಲಾಗಿದೆ. ಕರ್ನಾಟಕದಲ್ಲೂ  ಲಾಕ್ಡೌನ್ ಹೇರಲಾಗುವುದೇ ಎಂಬ ಪ್ರಶ್ನೆಗೆ ಕರ್ನಾಟಕದಲ್ಲಿ ಮಹಾರಾಷ್ಟ್ರದಂತಹ ಪರಿಸ್ಥಿತಿ ಇಲ್ಲ. ಇಲ್ಲಿ ನಿಯಂತ್ರಣದಲ್ಲಿದೆ. ಮತ್ತೊಮ್ಮೆ ಲಾಕ್ಡೌನ್ ಹೇರುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಸಚಿವರು ಉತ್ತರಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಕೊರೋನಾ ನಿಯಂತ್ರಣಕ್ಕೆ ಬಂದಿರುವುದು ನಿಜ. ಆದರೂ ಕೂಡಾ ಸಂಪೂರ್ಣವಾಗಿ ನಿರ್ಮೂಲನೆ ಅಗಿಲ್ಲ. ಮಾಸ್ಕ್, ದೈಹಿಕ ಅಂತರ ಮೊದಲಾದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿಯೇ ಪಾಲಿಸಬೇಕೆಂದು ಸಲಹೆ ನೀಡಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು