ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಾಗಿಲ್ಲ, ಸೋಲಿನ ಭೀತಿಯಿಂದ ಸುಳ್ಳು ಹೇಳುತ್ತಿದೆ: ಕೇಂದ್ರ ಸಚಿವ ಭಗವಂತ ಖುಬಾ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ರಸಗೊಬ್ಬರ ಕೊರತೆಯಿಲ್ಲ, ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿನ ಭೀತಿಯಿಂದ ರಸಗೊಬ್ಬರದ ಕೊರತೆಯಿದೆ ಎಂದು ಸುಳ್ಳು ವದಂತಿ ಸೃಷ್ಟಿಸುತ್ತಿದ್ದಾರೆ ಎಂದು ಕೇಂದ್ರ ರಸಗೊಬ್ಬರ ರಾಜ್ಯ ಸಚಿವ ಭಗವಂತ ಖುಬಾ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಖುಬಾ, ಕೇಂದ್ರದಿಂದ ಕರ್ನಾಟಕಕ್ಕೆ ಸಮರ್ಪಕ ರಸಗೊಬ್ಬರ ಒದಗಿಸಲಾಗುತ್ತಿದೆ. ಸಿದ್ದರಾಮಯ್ಯನವರ ಸುಳ್ಳಿನ ಹೇಳಿಕೆಗೆ ಕವಡೆ ಕಾಸಿನ‌ ಕೀಮತ್ತು ಬೇಡ, ರಾಜ್ಯದಲ್ಲಿ ಎಲ್ಲಿಯೂ ರಸಗೊಬ್ಬರದ ಕೊರತೆಯಾಗಿಲ್ಲ. ಸಿದ್ದರಾಮಯ್ಯ ಅವರು ಜನರಿಗೆ ಸುಳ್ಳು ಸುದ್ದಿ ನೀಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಹಾನಗಲ್ & ಸಿಂದಗಿ ಕ್ಷೇತ್ರದ ಜನರ ಆಶೀರ್ವಾದ ಬಿಜೆಪಿ ಮೇಲಿದೆ. ಉಪಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್ ಸುಳ್ಳು ಸುದ್ದಿ ಹರಡುತ್ತಿದೆ. ಕಳೆದ ವರ್ಷ 77% ರಷ್ಟು ಬಿತ್ತನೆಯಾಗಿತ್ತು. ಈ ವರ್ಷ 78.58% ರಷ್ಟು ಬಿತ್ತನೆಯಾಗಿದೆ. ರೈತರಿಗೆ ಸಮರ್ಪಕವಾಗಿ ಗೊಬ್ಬರ ಸರಬರಾಜು ಮಾಡಲಾಗಿದ್ದು.ಎಲ್ಲಿಯೂ ರಸಗೊಬ್ಬರದ ಕೊರತೆಯಾಗಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ವಸ್ತುಗಳ ದರ ಹೆಚ್ಚಿದರೂ ಕೇಂದ್ರ ಸರ್ಕಾರ ದರ ಏರಿಕೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯಕ್ಕೆ ನವೆಂಬರ್‌ ಅಂತ್ಯದವರೆಗೆ 2.10 ಲಕ್ಷ ಟನ್‌ ರಸಗೊಬ್ಬರ ಅಗತ್ಯವಿದ್ದು ಅಷ್ಟೂ ಪ್ರಮಾಣದ ರಸಗೊಬ್ಬರ ರಾಜ್ಯದಲ್ಲಿ ದಾಸ್ತಾನು ಇದೆ. ರಸಗೊಬ್ಬರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆಯಿಲ್ಲ, ಸರ್ಕಾರ ಸಮರ್ಥವಾಗಿ ಸಮಸ್ಯೆಗಳನ್ನು ಬಗೆಹರಿಸುತ್ತಿದೆ. ಕಾಂಗ್ರೆಸ್‌ ಸುಳ್ಳು ಹಬ್ಬಿಸುತ್ತಿದೆ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಭಗವಂತ ಖುಬಾ ತಿರುಗೇಟು ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು