ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ, ಆದರೆ ಸೆಮಿ ಲಾಕ್ ಡೌನ್, ಲಾಕ್ ಡೌನ್ ಇಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ ಸ್ಪಷ್ಟಪಡಿಸಿದ್ದಾರೆ.
ಮತ್ತೆ ಲಾಕ್ ಡೌನ್ , ಸೆಮಿ ಲಾಕ್ ಡೌನ್ ಆಗುವ ಬಗ್ಗೆ ಉಹಾಪೋಹಗಳು ಕೇಳಿಬರುತ್ತಿದ್ದವು. ಸದ್ಯದ ಪರಿಸ್ಥಿತಿಗೆ ಲಾಕ್ ಡೌನ್ ಅನ್ವಯವಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಗಡಿ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ವರದಿ ಕಡ್ಡಾಯ ಮಾಡಲಾಗಿದೆ. ಎಲ್ಲಾ ಸಾರ್ವಜನಿಕರು ಮಾಸ್ಕ್ ಧರಿಸಬೇಕು, ಇಲ್ಲದಿದ್ದರೆ ದಂಡ ವಿಧಿಸುವ ಬಗ್ಗೆ ಇಂದು ಅಥವಾ ನಾಳೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಸಭೆ, ಸಮಾರಂಭ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವ ನಿಯಮಗಳನ್ನು ಕಡ್ಡಾಯ ಮಾಡಲಾಗಿದೆ ಎಂದು ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದ್ದಾರೆ.