ರಾಜ್ಯಕ್ಕೊಂದು ಸುಭದ್ರವಾದ ಸರ್ಕಾರ ಕೊಡಿ, ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ: ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೊನಾ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ರಾಜ್ಯಕ್ಕೆ ಸುಭದ್ರ ಸರ್ಕಾರದ ಅಗತ್ಯ ಇದೆ. ಯಡಿಯೂರಪ್ಪ ಅವರನ್ನು ಇಟ್ಟುಕೊಳ್ತಿರಾ? ಕಿತ್ತುಹಾಕ್ತೀರಾ? ಬಿಜೆಪಿಗೆ ಸಂಬಂಧಿಸಿದ ವಿಚಾರ. ಶೀಘ್ರ ನಿರ್ಧಾರಕ್ಕೆ ಬಂದು ರಾಜ್ಯಕ್ಕೊಂದು ಸುಭದ್ರವಾದ ಸರ್ಕಾರ ಕೊಡಿ, ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿಹೋಗಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಮುನಿದಿರುವ ಪ್ರಕೃತಿ, ಅಲ್ಪ ದಯೆತೋರುತ್ತಿರುವ ಕಾರಣದಿಂದಾಗಿಯೋ ಏನೋ, ಕೊರೊನಾ ಸೋಂಕು ಸ್ವಲ್ಪ ತಹಬಂದಿಗೆ ಬರುತ್ತಿದೆ. ಅಷ್ಟರಲ್ಲಿ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಭಿನ್ನಮತದ ಜಗಳ ತಾರಕಕ್ಕೇರಿ ಆಡಳಿತ ಯಂತ್ರ ಸಂಪೂರ್ಣ ಸ್ಥಬ್ಧವಾಗಿರುವುದು ರಾಜ್ಯದ ಜನರ ದೌರ್ಭಾಗ್ಯ’ ಎಂದಿದ್ದಾರೆ.

ಕಚೇರಿಯಲ್ಲಿ ಕೂತು ಕೆಲಸಮಾಡಬೇಕಾದ ಸಚಿವರು ಮತ್ತು ಕ್ಷೇತ್ರದಲ್ಲಿ ಜನರ ಜೊತೆ ಇರಬೇಕಾದ ಬಿಜೆಪಿ ಶಾಸಕರು ದೆಹಲಿಯಿಂದ ಬಂದಿರುವ ಹೈಕಮಾಂಡ್ ಪ್ರತಿನಿಧಿ ಮುಂದೆ ಅಹವಾಲು ಸಲ್ಲಿಸಲು ಕ್ಯೂನಲ್ಲಿದ್ದಾರೆ. ಮುಖ್ಯಮಂತ್ರಿಗಳ ಪರ-ವಿರೋಧಿ ಬಣಗಳ ಕಿತ್ತಾಟದಲ್ಲಿ ಜನರ ನೋವನ್ನು ಕೇಳೋರು ಯಾರು? ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ, ಲಸಿಕೆ ನೀಡಿಕೆಯ ಕಾರ್ಯ ಕುಂಟುತ್ತಾ ಸಾಗಿದೆ, ಇನ್ನೊಂದೆಡೆ ಕೊರೊನಾ ಮೂರನೇ ಅಲೆಯ ಬಗ್ಗೆ ತಜ್ಞರು ನಿರಂತರವಾಗಿ ಎಚ್ಚರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ತನ್ನ ಉಳಿವಿಗಾಗಿ ಹೋರಾಡುತ್ತಿದ್ದಾರೆ, ಜನರನ್ನು ಉಳಿಸುವವರು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.

ಪಕ್ಷಾಂತರಿಗಳ ಅನೈತಿಕ ಬಲದಿಂದ ಬಂದ ಅಧಿಕಾರವನ್ನು ಅನುಭವಿಸುತ್ತಿರುವ ರಾಜ್ಯ ಬಿಜೆಪಿಯ ಮೂಲನಿವಾಸಿ ನಾಯಕರು ಈಗ ಅವರ ವಿರುದ್ಧವೇ ತಿರುಗಿ ಬಿದ್ದಿರುವುದು ಪ್ರಕೃತಿಯ ಸಹಜ ನ್ಯಾಯವೇ ಸರಿ. ಈಗಲೂ ಕಾಲ ಮಿಂಚಿಲ್ಲ, ಇಂತಹ ಅನೈತಿಕ ಬೆಂಬಲ ಬೇಡವೆಂದಾದರೆ ಪಕ್ಷಾಂತರಿಗಳನ್ನು ಕಿತ್ತು ಹಾಕಿ, ಯಾಕೆ ಗೋಳಾಡುತ್ತೀರಿ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು