ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ  ಶಾಸಕ ರಾಮದಾಸ್ ಗೆ  ದಿಡೀರ್ ಉಸಿರಾಟದ ತೊಂದರೆ!

ramdas
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮೈಸೂರು(19-10-2020): ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ದಿಡೀರ್ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೈಸೂರಿನ ಜಯದೇವ ಆಸ್ಪತ್ರೆಗೆ ಶಾಸಕ ರಾಮದಾಸ್ ಅವರು ದಾಖಲಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಮೈಸೂರಿನ ಜಯದೇವ ಆಸ್ಪತ್ರೆ ವೈದ್ಯರು ಒಳಪಡಿಸಿದ್ದಾರೆ.

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ರಾಮದಾಸ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅವರಿಗೆ ಕೋವಿಡ್ ಶಂಕೆ ವ್ಯಕ್ತವಾಗಿದೆ. ಈ ಕರಿತ ವರದಿ ಇನ್ನಷ್ಟೇ ಬರಬೇಕಿದೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು