ಕೊರೋನಾ ಹೋರಾಟದಲ್ಲಿ ವಿಫಲ; ಕರ್ನಾಟಕ ಆರೋಗ್ಯ ಸಚಿವರ ಬದಲಾವಣೆ

ramulu
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು 11/10/2020:  ಕೊರೊನಾವೈರಸ್ ವಿರುದ್ಧದ  ಹೋರಾಟದಲ್ಲಿ ತೀವ್ರ ವೈಫಲ್ಯವನ್ನು ಎದುರಿಸುತ್ತಿರುವ ಕರ್ನಾಟಕ ಬಿಜೆಪಿ ಸರ್ಕಾರವು ಈ ಬಗ್ಗೆ  ಮಹತ್ವದ ನಿರ್ಧಾರ ಕೈಗೊಂಡಿದೆ.

ಸರಕಾರವು ಆರೋಗ್ಯ ಸಚಿವರನ್ನೇ ಬದಲಾಯಿಸಿದ್ದು, ಈ ಕುರಿತಂತೆ ಸೋಮವಾರದಂದು ಅಧಿಕೃತವಾಗಿ ಆದೇಶ ಹೊರಡಿಸಲಾಗುತ್ತದೆ ಎಂದು ವರದಿಯಾಗಿದೆ.

ಸುದ್ದಿಮೂಲಗಳ ಪ್ರಕಾರ, ಈಗಾಗಲೇ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ಮಾಡಲಾಗಿದೆ. ಕೊರೋನಾ ಹೋರಾಟದಲ್ಲಿ ವೈಫಲ್ಯ ಕಂಡ ಹಿನ್ನೆಲೆಯಲ್ಲಿ ಬಿ. ಶ್ರೀರಾಮುಲು ಅವರ ಬಳಿ ಇದ್ದ ಆರೋಗ್ಯ ಖಾತೆಯನ್ನು ಡಾ ಸುಧಾಕರ್ ಅವರಿಗೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಖಾತೆ ಜೊತೆಗೆ ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಡಾ. ಸುಧಾಕರ್ ಅವರು ವಹಿಸಿಕೊಳ್ಳಲಿದ್ದಾರೆ.

ಶ್ರೀರಾಮುಲು ಅವರಿಗೆ ಹಿಂದುಳಿದ ವರ್ಗಗಳ ಖಾತೆಯ ಜತೆಗೆ ಸಮಾಜಕಲ್ಯಾಣ ಇಲಾಖೆಯ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಇದೆ. ಖಾತೆ ಬದಲಾವಣೆಯ ಆದೇಶ ಯಾವುದೇ ಕ್ಷಣದಲ್ಲಾದರೂ ಹೊರಬೀಳಬಹುದು ಎಂದು ಮೂಲಗಳು ತಿಳಿಸಿವೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು