ಮಧ್ಯಪ್ರದೇಶ (11-10-2020): 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪ್ರಾಪ್ತ ಬಾಲಕನೋರ್ವ ಮಧ್ಯಪ್ರದೇಶದ ರೇವಾದಲ್ಲಿ ಅತ್ಯಾಚಾರವನ್ನು ಮಾಡಿದ್ದು, ಬಾಲಕಿ ಘಟನೆಗೆ ಬೇಸತ್ತು ತನ್ನನ್ನು ತಾನೇ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಗೆ ಸುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂತ್ರಸ್ತೆಯ ಹೇಳಿಕೆಯ ಪ್ರಕಾರ, ಬುಧವಾರ ಅಪ್ರಾಪ್ತ ಬಾಲಕ ಆಕೆಯ ಮನೆಯೊಳಗೆ ಪ್ರವೇಶಿಸಿ,ಆಕೆಯ ಮನೆಯಲ್ಲಿ ಯಾರೂ ಇಲ್ಲ ಎಂದು ಖಾತ್ರಿ ಪಡಿಸಿ ಅವಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸ್ ಉಪ ವಿಭಾಗೀಯ ಅಧಿಕಾರಿ ಒಪಿ ಸಿಂಗ್ ಹೇಳಿದ್ದಾರೆ.
ಬಾಲಕಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅಪ್ರಾಪ್ತ ಬಾಲಕ ಅಪರಾಧ ಮಾಡಿದ ನಂತರ ಸ್ಥಳದಿಂದ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.