ಹತ್ರಾಸ್ ಘಟನೆ ಬೆನ್ನಲ್ಲೇ ಮತ್ತೋರ್ವ ದಲಿತ ಯುವತಿಯ ಅತ್ಯಾಚಾರ ನಡೆಸಿ ಅಂಗಾಗ ಮುರಿದು ಬರ್ಬರ ಕೊಲೆ!

Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಕ್ನೋ(01-10-2020): ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಯುವತಿಯೊಬ್ಬಳನ್ನು ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಎಸಗಿ, ನಾಲಗೆ ಕತ್ತರಿಸಿ, ಕೊಲೆ ಘಟನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ  ಹತ್ರಾಸ್‌ನಿಂದ 500 ಕಿ.ಮೀ ದೂರದಲ್ಲಿ, 22 ವರ್ಷದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಘಟನೆ ನಡೆದಿದೆ.

ಬಲರಾಂಪುರದ ಯುವತಿ ಲಕ್ನೋದ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಳು. ಮರಣೋತ್ತರ ವರದಿಯು ಸಾಮೂಹಿಕ ಅತ್ಯಾಚಾರವನ್ನು ದೃಢಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬರು ಅಪ್ರಾಪ್ತ ವಯಸ್ಕರು ಎಂದು ಯುವತಿಯ ಸಹೋದರ ತಿಳಿಸಿದ್ದಾರೆ.

ಬೆಳಿಗ್ಗೆ ಕೆಲಸಕ್ಕೆ ಹೋಗುವಾಗ ಯುವತಿಯನ್ನು ಅಪಹರಿಸಲಾಗಿದೆ ಎಂದು ಯುವತಿಯ ತಾಯಿ ಹೇಳಿದ್ದಾರೆ. ಮನೆಗೆ ಸಮಯಕ್ಕೆ ಸರಿಯಾಗಿ ಬರದಿದ್ದಾಗ ಪೊಲೀಸರಿಗೆ ದೂರು ನೀಡಲಾಗಿತ್ತು. ಬಳಿಕ ಘಟನೆ ಬಹಿರಂಗವಾಗಿದೆ.

ದುಷ್ಕರ್ಮಿಗಳು ಅವಳಿಗೆ ಚುಚ್ಚುಮದ್ದು ನೀಡಿದ್ದರಿಂದ ಆಕೆ ಪ್ರಜ್ಞೆ ಕಳೆದುಕೊಂಡಳು. ನಂತರ ಅವರು ಅವಳ ಮೇಲೆ ಅತ್ಯಾಚಾರ ಮಾಡಿದರು. ಅವರು ಅವಳ ಬೆನ್ನನ್ನು ಮುರಿದರು, ಕೈಕಾಲುಗಳನ್ನು ಮುರಿದರು. ನನ್ನ ಮಗುವಿಗೆ ಮಾತನಾಡಲು ನಿಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು