ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ: ಸಚಿವರ ಕನ್ನಡಾಭಿಮಾನ ಶೂನ್ಯತೆಗೆ ಕುಮಾರಸ್ವಾಮಿ ಆಕ್ರೋಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಹಿಂದಿಗೆ ಮೊದಲ ಸ್ಥಾನ ಆದ್ಯತೆ ನೀಡುವ ಮೂಲಕ ಕನ್ನಡವನ್ನು ಮರೆತ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕೆ ಕಿಡಿಕಾಕಿದ್ದಾರೆ.

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದಿದ್ದಾರೆ.

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಎಂದು ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ ‘ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ ಕರ್ನಾಟಕದಲ್ಲಿ ಕನ್ನಡವೇ ಮೊದಲು’ ಎಂದು ಅಭಿಪ್ರಾಯಪಟ್ಟಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು